ನಾದಪ್ರಿಯ ಶಿವನೆಂಬರು ನಾದಪ್ರಿಯ ಶಿವನಲ್ಲವಯ್ಯಾ
ವೇದಪ್ರಿಯ ಶಿವನೆಂಬರು ವೇದಪ್ರಿಯ ಶಿವನಲ್ಲವಯ್ಯಾ

ನಾದವ ಮಾಡಿದ ರಾವಣಂಗೆ ಅರೆ ಆಯುಷ್ಯವ ಇತ್ತು,
ವೇದವ ಓದಿದ ಬ್ರಹ್ಮನ ಶಿರವು ಹೋಯಿತ್ತು.

ನಾದಪ್ರಿಯನೂ ಅಲ್ಲ, ವೇದಪ್ರಿಯನೂ ಅಲ್ಲ
ಭಕ್ತಿ ಪ್ರಿಯ ನಮ್ಮ ಕೂಡಲಸಂಗಮ ದೇವ!

#ಬಸವಣ್ಣ #ಬಸವಜಯಂತಿ #Basavanna